ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮಕ್ಬೂಲಸಾಬ ಯೂಸೂಫ್​ಸಾಬ ಗಡದರ (38) ರೈತ.

ಇವರು ಬ್ಯಾಂಕ್​ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net