ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ನಡೆದಿದೆ.

ವೀರಪ್ಪ ಭುಜಂಗಪ್ಪ ಬಾಗಾರ (54) ಮೃತ ರೈತ.

ಇವರು ಬ್ಯಾಂಕ್​ನಲ್ಲಿ ಹಾಗೂ ಕೈಗಡವಾಗಿ 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮೂರ್ನಾಲ್ಕು ವರ್ಷಗಳಿಂದ ಜಮೀನಿನಲ್ಲಿ ಬೆಳೆದ ಬೆಳೆ ಅತಿವೃಷ್ಟಿಯಿಂದ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net