

ಶಿಗ್ಗಾಂವಿ: ಸಾಲಬಾಧೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಗೂರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಂಜುನಾಥ ಶಿವಪುತ್ರಪ್ಪ ಉಪ್ಪಾರ (40) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಸಂಘಗಳಲ್ಲಿ 5.20 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.