

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಗಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಬಸವರಾಜ ಸಿದ್ದಬಸಪ್ಪ ಕೊಂಡೋಜಿ (31) ಮೃತ ರೈತ.
ಇವರು ಬ್ಯಾಂಕ್ ಹಾಗೂ ಸಹಕಾರಿ ಸಂಘದಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಕಳೆದ ಬಾರಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿಯೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.