

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.
ಹನುಮಂತ ರಾಮಪ್ಪ ಪೂಜಾರ (33) ಮೃತ ರೈತ.
ಇವರು ಬ್ಯಾಂಕ್ನಲ್ಲಿ 1.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಮಳೆ ಬಾರದ ಕಾರಣ ಒಣಗಿ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಕುಮುದ್ವತಿ ನದಿ ದಂಡೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.