ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಉದಯ ಉಮೇಶ ಕೋಪ್ಪಣ್ಣನವರ (24) ಮೃತ ರೈತ.

ಇವರು ಕೃಷಿಗಾಗಿ ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿದ್ದರಿಂದ ಮನನೊಂದು ಸಾಲ ತೀರಿಸಲಾಗದೆ ಮನೆ ಹಿಂಭಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net