ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ

Crime Logo
Published on
ಬ್ಯಾಡಗಿ: ಸಾಲಬಾಧೆಯಿಂದ ಯುವ ರೈತರೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗಣೇಶ ಸುರೇಶ ನಾಡಗೇರ (21) ಮೃತ ರೈತ. ಈತ 4.28 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಆದರೆ, ಅತಿಯಾದ ಮಳೆಯಿಂದ ಬೆಳೆ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net