ಮಾಡಿದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Former sucide+2
Published on

ರಾಣೆಬೆನ್ನೂರ: ಮಾಡಿದ ಸಾಲ ತೀರಿಸಲಾಗದೆ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನದಿಹರಳಹಳ್ಳಿಯಲ್ಲಿ ಬುಧವಾರ ನಡೆದಿದೆ.

ರಾಮಪ್ಪ ಹನುಮಪ್ಪ ಬೆನ್ನೂರ (78) ಮೃತ ವೃದ್ಧ.

ಇವರು ಕೈಗಡವಾಗಿ ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲಾಗದೆ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕುಮಾರಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net