ಮೃತ ರೈತ ದಂಪತಿ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ

7Jaggu6-web
ಬಿಜಗರ್ಣಿಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಅಮಿತ್ ದೇಸಾಯಿ ಮನೆಗೆ ಸಚಿವೆ ಹೆಬ್ಬಾಳ್ಕರ್ ಭೇಟಿ ನೀಡಿ ಸಾಂತ್ವನ ಹೇಳಿದರು. ಚಂದ್ರಮಾಲಾ ದೇಸಾಯಿ, ಅನನ್ಯ ಇತರರಿದ್ದರು.
Published on

ಬೆಳಗಾವಿ: ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಅಮಿತ್ ದೇಸಾಯಿ ಹಾಗೂ ಲತಾ ದಂಪತಿ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಸಾಂತ್ವನ ಹೇಳಿದರು.

ಅಳಿಯ ಮತ್ತು ಮಗಳನ್ನು ಕಳೆದುಕೊಂಡು ಆಘಾತಕ್ಕೋಳಗಾಗಿರುವ ತಾಯಿ ಚಂದ್ರಮಾಲಾ ದೇಸಾಯಿ ಅವರನ್ನು ಸಂತೈಸಿದರು. ಲಕ್ಷ್ಮೀತಾಯಿ ಫೌಂಡೇಷನ್‌ನಿಂದ ಆರ್ಥಿಕ ಸಹಾಯ ನೀಡಿ, ಸರ್ಕಾರದಿಂದಲೂ ಪರಿಹಾರ ಬಿಡುಗಡೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. 2 ವರ್ಷದ ಹೆಣ್ಣು ಮಗು ಅನನ್ಯಳನ್ನು ಕಂಡು ಚಿಕ್ಕ ಮಗು ತಂದೆ-ತಾಯಿ ಕಳೆದುಕೊಂಡ ನೋವು ಯಾವ ಮಗುವಿಗೂ ಬಾರದಿರಲಿ ಎಂದರು. ಗ್ರಾಮದ ಹಿರಿಯರು, ತಹಸೀಲ್ದಾರ್, ಉಪ ವಿಭಾಗಾಧಿಕಾರಿ, ಹೆಸ್ಕಾಂ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net