ಅಲೋಪಥಿ ವೈದ್ಯರಿಂದ 11ರಂದು ಒಪಿಡಿ ಬಂದ್

health check up
Published on

ಉಡುಪಿ: ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್‌ನ ನಡೆಯಿಂದ ಆಧುನಿಕ ವೈದ್ಯಕೀಯ ವೃತ್ತಿ ಸಂಕಷ್ಟಕ್ಕೊಳಗಾಗಿದ್ದು, ಸ್ನಾತಕೋತ್ತರ ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮಾವಳಿಗಳ ಅಧಿಸೂಚನೆ ಹಿಂಪಡೆಯಬೇಕು ಎಂದು ಭಾರತೀಯ ವೈಧ್ಯಕೀಯ ಸಂಘ ಉಡುಪಿ ಶಾಖೆ ಆಗ್ರಹಿಸಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಆಯುರ್ವೇದಿಕ್ ವ್ಯಾಸಂಗ ಮಾಡಿದ ವೈದ್ಯರು, ಅಲೋಪಥಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಮಾಡಬಹುದೆಂದು ಆದೇಶ ಹೊರಡಿಸಿದೆ. ಇದನ್ನು ವಿರೋಧಿಸಿರುವ ಅಲೋಪಥಿ ವೈದ್ಯರು ಡಿ.11ರಂದು ಬೆಳಗ್ಗೆ 6ರಿಂದ ಸಾಯಂಕಾಲ 6ರ ತನಕ ತುರ್ತು ಚಿಕಿತ್ಸೆ ಬಿಟ್ಟು ಉಳಿದ ಒಪಿಡಿ ಸೇವೆಗಳನ್ನು ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net