ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಪಾವತಿಗೆ ಡಿ.29 ಕೊನೇ ದಿನ

SSLC
Published on

ಬೆಂಗಳೂರು: 2023ರ ಏಪ್ರಿಲ್​ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸುವ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ರ್ನಿಣಯ ಮಂಡಳಿ ಪ್ರಕಟಿಸಿದೆ.

ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸುವ ಚಲನ್​ ಮಂಡಲಿಯ ಶಾಲಾ ಲಾಗಿನ್​ಲ್ಲಿಯೇ ಲಭ್ಯವಾಗಲಿದೆ. ಶಾಲಾ ಲಾಗಿನ್​ ಮೂಲಕವೇ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಮಂಡಲಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಡಿ.21ರಿಂದ 27ರ ವರೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್​ ಮುದ್ರಿಸಿಕೊಳ್ಳಲು ಅವಕಾಶವಿದೆ. ಡಿ.29ರ ವರೆಗೆ ಚಲನ್​ ಮುದ್ರಿಸಿಕೊಂಡು ಬ್ಯಾಂಕಿಗೆ ಪ್ರವೇಶ ಶುಲ್ಕ ಜಮೆ ಮಾಡಲು ಅವಕಾಶ ನೀಡಲಾಗಿದೆ. 2022 ಹಾಗೂ ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರರಾವರ್ತಿತ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಹಳೆಯ ಪದ್ದತಿಯಂತೆ ಮಂಡಳಿಯ ನೆಫ್ಟ್​ ಚಲನ್​ ಮೂಲಕ ರಾಷ್ಟ್ರೀಕೃತ ಬ್ಯಾಂಕ್​ನಲ್ಲಿ ಪಾವತಿಸಲು ಡಿ.29 ಕೊನೆಯ ದಿನಾಂಕವಾಗಿದೆ. ಇಂತಹ ಅಭ್ಯರ್ಥಿಗಳು ಜ.6ರೊಳಗೆ ಸಂಬಂಧಿಸಿದ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net