ಡಿಸೆಂಬರ್ ಒಳಗೆ ಪಠ್ಯಕ್ರಮ ಮುಗಿಸಿ

hadagali beo
ಹೂವಿನಹಡಗಲಿಯ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮುಖ್ಯಶಿಕ್ಷಕರ ಶೈಕ್ಷಣಿಕ ಪ್ರಗತಿ ಸಭೆಯಲ್ಲಿ ಬಿಇಒ ಮಹೇಶ್ ಪೂಜಾರ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರಫಿ ಅಹಮದ್ ಇತರರಿದ್ದರು.
Published on

ಹೂವಿನಹಡಗಲಿ: ಡಿಸೆಂಬರ್ ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಪೂರ್ಣಗೊಳಿಸಿ ಜನವರಿಯಿಂದ ಪಾಠಗಳನ್ನು ಪುನರಾವರ್ತನೆ ಮಾಡಬೇಕು ಎಂದು ಬಿಇಒ ಮಹೇಶ್ ಪೂಜಾರ ಹೇಳಿದರು.

ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯಶಿಕ್ಷಕರ ಶೈಕ್ಷಣಿಕ ಪ್ರಗತಿ ಸಭೆಯಲ್ಲಿ ಮಾತನಾಡಿದರು.

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಯೋಜನೆ ರೂಪಿಸಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ಪ್ರತಿ ಭಾನುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಆರಂಭಿಸಿ. ಗೈರಾಗುತ್ತಿರುವ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪಾಲಕರಿಗೆ ಜಾಗೃತಿ ಮೂಡಿಸಬೇಕು ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರಫಿ ಅಹಮದ್, ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷ ಜಿ.ಎಂ.ಕಾಂತೇಶ್, ಉಪ ಪ್ರಾಚಾರ್ಯ ರವೀಂದ್ರನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net