ಲಾಭದಾಸೆ ತೋರಿಸಿ ವಂಚನೆ

cybe crime
Published on

ಹುಬ್ಬಳ್ಳಿ: ಟೆಲಿಗ್ರಾಂ ಆ್ಯಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಬಹುದೆಂದು ನಗರದ ಮಹಿಳೆಯೊಬ್ಬರಿಗೆ ನಂಬಿಸಿ 3.69 ಲಕ್ಷ ರೂ. ವಂಚಿಸಲಾಗಿದೆ.

ಸುರೇಶ ಎಂಬುವವರ ಪತ್ನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕಿಸಿದ ವಂಚಕರು, ಹೂಡಿಕೆ ಹೆಸರಲ್ಲಿ ವಿವಿಧ ಮಾಹಿತಿ ಪಡೆದಿದ್ದಾರೆ. ನಂತರ ಬ್ಯಾಂಕ್ ಖಾತೆಗಳ ಮೂಲಕ 3,69,590 ರೂ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net