ಕೆಂಪೇಗೌಡ ಜಯಂತ್ಯುತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

IMG-20240618-WA0168
Published on

ಕೆ.ಆರ್.ಪೇಟೆ: ಬೆಂಗಳೂರು ನಗರ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಜನ್ಮದಿನ ಕಾರ್ಯಕ್ರಮವನ್ನು ಜೂ.27ರಂದು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿತು.


ಪಟ್ಟಣದ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಮಿತಿಯ ಕಾರ್ಯದರ್ಶಿ ತಹಸೀಲ್ದಾರ್ ನಿಸರ್ಗಪ್ರಿಯ ಅವರು, ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು, ಅಧಿಕಾರಿಗಳಿಂದ ಸಲಹೆಗಳನ್ನು ಪಡೆದುಕೊಂಡರು.


ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮೇಗೌಡ, ನಾಟನಹಳ್ಳಿ ಗಂಗಾಧರ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಂ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕ ಎಸ್.ಎಲ್.ಮೋಹನ್, ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net