ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
Published on

ಯಳಂದೂರು: ತಾಲೂಕು ಆಡಳಿತದ ವತಿಯಿಂದ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಎಲ್ಲ್ಲ ಶಾಲಾ ಕಾಲೇಜು, ಇಲಾಖೆಗಳು, ಸಂಘಸಂಸ್ಥೆಗಳು, ಸಾರ್ವಜನಿಕರ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂವಿಧಾನ ಪೀಠಿಕೆ, ಮಹಾತ್ಮಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಮೆರವಣಿಗೆ ಮಾಡಬೇಕು. ವೇದಿಕೆ ಕಾರ್ಯಕ್ರಮವನ್ನು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಸಬೇಕು. ನಿಗಧಿತ ಸಮಯದೊಳಗೆ ಕಾರ್ಯಕ್ರವನ್ನು ಮುಗಿಸಬೇಕು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಬೇಕು. ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿ ಸರ್ಕಾರಿ ಕಚೇರಿಗಳಿಗೂ ವಿದ್ಯುತ್ ದೀಪಾಲಂಕಾರ ಮಾಡಬೇಕು. ಅಲ್ಲದೆ ಪಟ್ಟಣ ಪ್ರಮುಖ ಸರ್ಕಲ್‌ಗಳಲ್ಲಿ ಸಂವಿಧಾನದ ಪೀಠಿಕೆಯ ಫ್ಲೆಕ್ಸ್‌ಗಳನ್ನು ಹಾಕಿಸಬೇಕು. ಇದಕ್ಕೆ ವಿದ್ಯುತ್ ಅಲಂಕಾರ ಮಾಡಬೇಕು. ಪ್ರತಿ ಇಲಾಖೆಯ ಅಧಿಕಾರಿಗಳು ತಪ್ಪದೆ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮದಲ್ಲಿ ಗೈರಾಗುತ್ತಾರೆ. ಈ ಬಗ್ಗೆ ಇವರ ವಿರುದ್ಧ ಸೂಕ್ತ ಕ್ರಮವಹಿಸಬೇಕು ಎಂದು ಸಾರ್ವಜನಿಕರು. ವಿವಿಧ ಸಂಘಟನೆಯ ಪ್ರಮುಖರು ಒತ್ತಾಯಿಸಿದರು.

ಪ.ಪಂ.ಮುಖ್ಯಾಧಿಕಾರಿ ಮಹೇಶ್ ಕುಮಾರ್, ಸದಸ್ಯ ಮಹೇಶ್, ಲಿಂಗರಾಜಮೂರ್ತಿ, ಪಿಎಸ್‌ಐ ಹನುಮಂತ ಉಪ್ಪಾರ್, ಕೆಇಬಿ ಎಇಇ ಲಿಂಗರಾಜು, ಸಿಡಿಪಿಒ ಸಕಲೇಶ್ವರ್, ರಜಸ್ವ ನಿರೀಕ್ಷಕ ಯದುಗಿರಿ, ತಾಲೂಕು ಆರೋಗ್ಯಾಧಿಕಾರಿ ಡಾ.ತನುಜಾ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮಹೇಶ್, ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ, ಕರವೇ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net