ಶಾಲೆ ಆರಂಭ ಭವಿಷ್ಯ ನಾಳೆ ನಿರ್ಧಾರ?

andhra school
Published on

ಬೆಂಗಳೂರು: ಶಾಲೆ ಆರಂಭ ಕುರಿತು ಶಿಕ್ಷಣ ಇಲಾಖೆ ಸರಣಿ ಸಭೆಗಳನ್ನು ನಡೆಸಿದ್ದು, ಇವರಿಂದ ಸಂಗ್ರಹಿಸಿರುವ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ವರದಿ ತಯಾರಿಸಿ ಸೋಮವಾರ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದೆ.

ರಾಜ್ಯದಲ್ಲಿ ಕರೊನಾ ಸೋಂಕು ಕೊಂಚ ಇಳಿಮುಖವಾಗಿದ್ದು, ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಶಾಲೆ ಆರಂಭ ಅನಿವಾರ್ಯವೆಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಮೂರು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಕಳೆದ ಒಂದು ವಾರದಿಂದ ಸರಣಿ ಸಭೆಗಳನ್ನು ಆರಂಭಿಸಿದೆ.

ಶನಿವಾರ ಶಿಕ್ಷಣ ಇಲಾಖೆ ಆಯುಕ್ತರು ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರತರಾಗಿದ್ದರಿಂದ ಸಭೆಗಳಲ್ಲಿ ಸಂಗ್ರಹವಾಗಿರುವ ಅಭಿಪ್ರಾಯಗಳನ್ನು ಪರಿಶೀಲಿಸಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ವರದಿ ಅಂತಿಮಗೊಳಿಸಿ ಶಿಷ್ಠಾಚಾರದ ಪ್ರಕಾರ ಆಯುಕ್ತರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಲಿದ್ದಾರೆ. ಆನಂತರ ಸಚಿವರು, ಸಿಎಂಗೆ ವರದಿ ಸಲ್ಲಿಕೆಯಾಗಲಿದ್ದು, ಮುಖ್ಯಮಂತ್ರಿಗಳು ಪರಿಶೀಲಿಸಿ ಆನಂತರ ಸಚಿವರೊಂದಿಗೆ ಸಭೆ ನಡೆಸಿ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net