ವಾಪಸ್ ಪಡೆಯುವ ನಿರ್ಧಾರ ಕಾನೂನಾತ್ಮಕವಾಗಿ ಸರಿಯಲ್ಲ

joshi MP
Published on

ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವು ಚಾರ್ಜ್​ಶೀಟ್ ಸಲ್ಲಿಕೆ ಹಂತಕ್ಕೆ ತಲುಪಿರುವಾಗ ವಾಪಸ್ ಪಡೆಯಲು ನಿರ್ಧರಿಸಿರುವುದು ದುರ್ದೈವದ ಸಂಗತಿ. ಇದು ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಲಯದಲ್ಲಿ ವಿಶ್ವಾಸವಿಲ್ಲ ಎಂಬುದನ್ನು ತೋರಿಸುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net