ಸಮ್ಮೇಳನದಲ್ಲಿ ಸಾಧಕರಿಗೆ ಮಣೆ ಹಾಕಲು ನಿರ್ಧಾರ

ಸರಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವೈ.ಡಿ.ರಾಜಣ್ಣ ಮಾತನಾಡಿದರು.
ಸರಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವೈ.ಡಿ.ರಾಜಣ್ಣ ಮಾತನಾಡಿದರು.
Published on

ಸರಗೂರು: ಜ.17ರಂದು ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕರನ್ನು ಸನ್ಮಾನಿಸುವ ಕುರಿತು ಚರ್ಚೆ ನಡೆಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು.

ವಿವಿಧ ಕ್ಷೇತ್ರಗಳಲ್ಲಿ ತಾಲೂಕಿನ ಕನ್ನಡಿಗರು ಮಾಡಿರುವ ಸಾಧನೆಯನ್ನು ಗುರುತಿಸಿ ಸನ್ಮಾನ ಮಾಡಲು ಪರಿಷತ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸರಗೂರು ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಸಂಗೀತ, ಸಾಹಿತ್ಯ, ಕಲೆ, ನೃತ್ಯ, ಕೃಷಿ, ತೋಟಗಾರಿಕೆ, ರಂಗಭೂಮಿ, ಸಿನಿಮಾ, ಕ್ರೀಡೆ, ಸಮಾಜ ಸೇವೆ, ಸರ್ಕಾರಿ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ನಿಕಟಪೂರ್ವ ಅಧ್ಯಕ್ಷ ವೈ.ಡಿ.ರಾಜಣ್ಣ ತಿಳಿಸಿದರು.

ಜ.1ರೊಳಗೆ ಅರ್ಹರು ಸಮ್ಮೇಳನದ ಸಾಧಕರ ಆಯ್ಕೆ ಸಮಿತಿ ಸಂಚಾಲಕ ಗ್ರಾಮೀಣ ಮಹೇಶ್ ಮೊ.ನಂ. 9880821541 ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net