ಜಯಂತಿಗಳ ಆಚರಣೆಗೆ ನಿರ್ಧಾರ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇ 2ರಂದು ಸಂಜೆ 5 ಗಂಟೆಗೆ ಶ್ರೀ ಶಂಕರಾಚಾರ್ಯ ಜಯಂತಿ, ಮೇ 4ರಂದು ಬೆಳಗ್ಗೆ 11.30ಕ್ಕೆ ಶ್ರೀ ಭಗೀರಥ ಜಯಂತಿಯನ್ನು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್​ ಭವನದಲ್ಲಿ ಹಾಗೂ ಮೇ 10 ರಂದು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾಡಳಿತ ಕಚೇರಿ ಸಭಾಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದರು.

ಶ್ರೀ ಶಂಕರಾಚಾರ್ಯ ಸಮಿತಿ ಅಧ್ಯಕ್ಷ ಆರ್​.ಡಿ.ಕುಲಕರ್ಣಿ, ಶ್ರೀ ಭಗೀರಥ ಸಮಿತಿ ಅಧ್ಯಕ್ಷ ಸತೀಶ ಮುರಗೋಡ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಿತಿ ಅಧ್ಯಕ್ಷ ಅಜ್ಜನ್​ ಅಳಗವಾಡಿ, ಸಮಾಜದ ಮುಖಂಡರು, ಇತರರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net