ಜಯಂತಿಗಳನ್ನು ಅರ್ಥಪೂರ್ಣ ಆಚರಿಸಲು ನಿರ್ಧಾರ

25 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಡಾ. ಬಾಬು ಜಗಜೀವನ್​ ರಾಂ ಜನ್ಮದಿನ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜನರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಾ. ಬಾಬು ಜಗಜೀವನ್​ ರಾಂ ಹಾಗೂ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿಗಳನ್ನು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ವಿಚಾರ ಸಂಕಿರಣ, ವಿಶೇಷ ಉಪನ್ಯಾಸ ಆಯೋಜಿಸುವ ಮೂಲಕ ಅರ್ಥರ್ಪೂಣವಾಗಿ ಆಚರಿಸಲಾಗುತ್ತದೆ ಎಂದರು.

ಮಹಾತ್ಮರ ಜಯಂತಿಗಳ ಮುನ್ನಾ ದಿನ ಅಂಬೇಡ್ಕರ ಭವನದಲ್ಲಿ ವಿಚಾರ ಸಂಕಿರಣ, ಜಯಂತಿ ದಿನದಂದು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಗರದ ಪ್ರಮುಖ ವೃತ್ತ, ಬೀದಿಗಳ ಮೂಲಕ ಭಾವಚಿತ್ರದ ಭವ್ಯ ಮೆರವಣಿಗೆ ಆಯೋಜಿಸಲಾಗುತ್ತದೆ. ಜಯಂತಿ ವೇದಿಕೆ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಪೊಲೀಸ್​ ಅಧೀಕ ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಸಹಾಯಕ ಪೊಲೀಸ್​ ಆಯುಕ್ತ ಪ್ರಶಾಂತ ಸಿದ್ದನಗೌಡರ, ಪ್ರಮುಖರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net