25ರಂದು ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ

oppo_2
ಹನೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಿಸುವ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ವೆಂಕಟೇಗೌಡ ಮಾತನಾಡಿದರು. ಲಿಂಗರಾಜುಗೌಡ, ಚಿಕ್ಕತಮ್ಮೇಗೌಡ, ಗಿರೀಶ್‌ಕುಮಾರ್, ಮಹೇಶ್ ಇತರರು ಇದ್ದರು.
Published on

ಹನೂರು: ಪಟ್ಟಣದಲ್ಲಿ ಜು.25ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು.
ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದ ಆವರಣದಲ್ಲಿ ಶುಕ್ರವಾರ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಆಯೋಜಿಸಿದ್ದ ಒಕ್ಕಲಿಗ ಸಮುದಾಯದ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ವೇಳೆ ಮೆರವಣಿಗೆ ಹಾಗೂ ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತಲ್ಲದೆ ಮುಖಂಡರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು. ಆಹ್ವಾನಿಸಬೇಕಾದ ಗಣ್ಯರ ಬಗ್ಗೆ ಪಟ್ಟಿ ತಯಾರಿಸಲಾಯಿತು. ಜಯಂತಿಯ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.
ಹಿರಿಯ ಮುಖಂಡ ವೆಂಕಟೇಗೌಡ ಮಾತನಾಡಿ, ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗ ಸಮುದಾಯದ ಜನರಿದ್ದು, ಎಲ್ಲರೂ ಒಟ್ಟುಗೂಡಿ 2 ವರ್ಷಗಳಿಂದ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದೇ ರೀತಿ ಈ ಬಾರಿಯೂ ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಜಯಂತಿ ಆಚರಿಸಲಾಗುತ್ತಿದೆ. ಆದ್ದರಿಂದ ಯಾವುದೇ ಗಲಾಟೆಗಳಿಗೆ ಆಸ್ಪದ ನೀಡದೆ ಜಯಂತಿಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಈ ದೆಸೆಯಲ್ಲಿ ನೀಡಿರುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ವಿಶ್ವಮಾನವ ಒಕ್ಕಲಿಗರ ಸಂಘದ ಅಧ್ಯಕ್ಷ ಲಿಂಗರಾಜುಗೌಡ, ಪಪಂ ಸದಸ್ಯ ಗಿರೀಶ್‌ಕುಮಾರ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ, ಮುಖಂಡರಾದ ಚಿಕ್ಕತಮ್ಮೇಗೌಡ, ಮಹೇಶ್, ಮಾದೇಶ್, ವೆಂಕಟೇಶ್, ಶಂಕರೇಗೌಡ, ಚೇತನ್, ಸೋಮಶೇಖರ್, ಚೇತನ್‌ಕುಮಾರ್, ಅಭಿಲಾಷ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net