ಅರಸು ಜಯಂತಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ

ARASU JAYANTI MEETING
ವಿಜಯಪುರ ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಹಿನ್ನೆಲೆ ಎಡಿಸಿ ಸೋಮನಿಂಗ ಗೆಣ್ಣೂರ ಪೂರ್ವಭಾವಿ ಸಭೆ ನಡೆಸಿದರು. ಪುಂಡಲಿಕ ಮಾನವರ, ಸಿ.ಬಿ. ಕುಂಬಾರ, ಬದ್ರುದ್ದಿನ್ ಸೌದಾಗರ ಮತ್ತಿತರರಿದ್ದಾರೆ.
Published on

ವಿಜಯಪುರ: ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನವನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಆಯೋಜಿಸಲು ನಿರ್ಧರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿರುವ ನಿಲಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ವಿಶೇಷ ಉಪನ್ಯಾಸ, ರೂಪಕ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಅಶೋಕ ಗೋಣಸಗಿ, ಜಿಲ್ಲಾ ಶಸತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕಾರ್ಯನಿರ್ವಾಹಕ ಅಭಿಯಂತರ ಶಾಂತವೀರ ಕೊಳ್ಳಿ, ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ್.ಕೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net