ಗೋಪಾಲ ಭಂಡಾರಿ ಟ್ರಸ್ಟ್ ಸ್ಥಾಪನೆಗೆ ನಿರ್ಧಾರ

hbr (3)
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಹೆಬ್ರಿಯ ಚೈತನ್ಯ ಯುವ ವೃಂದದ ಸಭಾಭವನದಲ್ಲಿ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆಯ ಲೆಕ್ಕಪತ್ರ ಮಂಡನೆ ಮತ್ತು ಸಮಾಲೋಚನಾ ಸಭೆ ಇತ್ತೀಚೆಗೆ ನಡೆಯಿತು.

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ಜನನಾಯಕ ಗೋಪಾಲ ಭಂಡಾರಿ ಹೆಸರಿನಲ್ಲಿ ಅವರ ಕುಟುಂಬದ ಸದಸ್ಯರನ್ನೊಳಗೊಂಡು ಸಾಮಾಜಿಕ ಸೇವಾ ಟ್ರಸ್ಟ್ ಸ್ಥಾಪಿಸಿ ಆ ಮೂಲಕ ಅವರ ಸಂಸ್ಮರಣೆ, ವಿದ್ಯಾರ್ಥಿವೇತನ ವಿತರಣೆ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಹಿತ ಪ್ರತಿ ವರ್ಷ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ತಿಳಿಸಿದರು.

ವೇದಿಕೆಯ ಕೋಶಾಧಿಕಾರಿ ಎಚ್.ಜನಾರ್ದನ್ ಲೆಕ್ಕಪತ್ರ ಮಂಡಿಸಿದರು. ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆಯ ಕಾರ್ಯದರ್ಶಿ ನವೀನ್ ಕೆ.ಅಡ್ಯಂತಾಯ, ಹೆಬ್ರಿ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್, ಚಾರ ಗ್ರಾಪಂ ಅಧ್ಯಕ್ಷ ದಿನೇಶ ಶೆಟ್ಟಿ, ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net