ಜಿಲ್ಲೆಯಲ್ಲಿ ಕಾರ್ಮಿಕ ಸಮಾವೇಶ ನಡೆಸಲು ನಿರ್ಧಾರ

13 yelandur 01
Published on
  • ಚಾಮರಾಜನಗರ: ಕಾಂಗ್ರೆಸ್ ಪಕ್ಷದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಜಿಲ್ಲಾ ಕಾರ್ಮಿಕರ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕಾಂಗ್ರೆಸ್ ಯುವ ಮುಖಂಡ ಡಿ.ಎನ್.ನಟರಾಜು ಮಾಹಿತಿ ನೀಡಿದರು.
  • ಯಳಂದೂರು ತಾಲೂಕಿನ ಮೆಳ್ಳಹಳ್ಳಿ ಗೇಟ್ ಬಳಿಯಿರುವ ಆರ್ಯ ಫ್ಯೂಯಲ್ ಸ್ಟೇಷನ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಅವರ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದರು.

  • ಈ ಸಮಾವೇಶದಲ್ಲಿ ಕಾರ್ಮಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಹಾಗಾಗಿ, ಈ ಸಮಾವೇಶಕ್ಕೆ 2ರಿಂದ 3 ಸಾವಿರ ಕಾರ್ಮಿಕರನ್ನು ಸೇರಿಸಬೇಕಾಗಿದೆ ಎಂದು ತಿಳಿಸಿದರು.

  • ಕೆಪಿಸಿಸಿ ರಾಜ್ಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮಾತನಾಡಿ, ಕಾರ್ಮಿಕ ಸಮಾವೇಶದ ಬಳಿಕ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು. ಈ ಮೇಳದಲ್ಲಿ 80ಕ್ಕೂ ಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಕಂಪನಿಗಳು ಭಾಗವಹಿಸಲಿವೆ. ಉದ್ಯೋಗ ಮೇಳದ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು ಎಂದು ವಿವರಿಸಿದರು.
  • ಸಭೆಯಲ್ಲಿ ಜಿಲ್ಲಾ ಕಾರ್ಮಿಕರ ಸಂಘದ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಆನಂದ್, ಪ್ರತಾಪ್ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net