ಕುಂದಗೋಳ ಬರಪೀಡಿತವೆಂದು ಘೋಷಿಸಿ

M.R. Patil
Published on

ಬೆಂಗಳೂರು: ಕುಂದಗೋಳ ತಾಲೂಕಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತವೆಂದು ಘೋಷಿಸಬೇಕು. ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮಂಜೂರು ಮಾಡಬೇಕೆಂದು ಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ ಒತ್ತಾಯಿಸಿದರು.

ಸದನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ 20-25 ಕಿ.ಮೀ. ನಷ್ಟು ಬೆಣ್ಣಿಹಳ್ಳ ಹಾದು ಹೋಗಿದೆ. ಸುಮಾರು 2-3 ಸಾವಿರ ಎಕರೆ ಭೂಮಿಗೆ ಹಾನಿಯಾಗುತ್ತಿದೆ. ಕೂಡಲೇ ಹಳ್ಳದ ಹೂಳೆತ್ತುವ ಕಾರ್ಯ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿ ವರ್ಷ ಕ್ಷೇತ್ರದ ಜನರು ಪ್ರವಾಹ ಎದುರಿಸಬೇಕಾಗುತ್ತದೆ ಎಂದರು.

ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ರಾಜ್ಯದಲ್ಲಿ ಪೋಡಿ ಮುಕ್ತ ಗ್ರಾಮ ಯೋಜನೆ ಜಾರಿಗೊಳಿಸಲಾಯಿತು. ಇದರಲ್ಲಿ ಎಲ್ಲ ಹಿಸ್ಸಾಗಳನ್ನು ಒಂದುಗೂಡಿಸಿ ಪ್ರಮಾಣಪತ್ರ ಕೊಡುವುದು ಇತ್ತು. ಈ ಯೋಜನೆಗೆ ಸಂಬಂಧಿಸಿದಂತೆ ಆಫ್‌ಲೈನ್‌ನಲ್ಲಿ ಆರ್ಜಿ ಕೊಡಲು ಅವಕಾಶವಿತ್ತು. ಆದರೆ ಈ ಯೋಜನೆಯನ್ನು 2023ರ ಜೂನ್ 30ರಿಂದ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು, ಇದರಿಂದ ಸಾಕಷ್ಟು ಜನರು ಪೋಡಿ ಮಾಡಿಕೊಳ್ಳಲು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಯೋಜನೆಯನ್ನು ಮರು ಆರಂಭಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net