

ಶೃಂಗೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲೂಕು ರೈತ ಸಂಘದ ಸದಸ್ಯರು ತಾಲೂಕು ಕಚೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಉಪ ತಹಸೀಲ್ದಾರ್ ಅನುಪ್‌ಸಚಿಗೊಗೆ ಮನವಿ ಸಲ್ಲಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರೈತರು ಬೆಳೆದ ಅಡಕೆ, ಕಾಳುಮೆಣಸು, ಕಾಫಿ, ಭತ್ತ ಮುಂತಾದ ಬೆಳೆಗಳಿಗೆ ಹಾನಿಯಾಗಿ ಬೆಳೆ ನಾಶವಾಗಿ ರೈತರು ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ತಾಲೂಕನ್ನು ಅತಿವೃಷ್ಟಿ ಪೀಡಿತ ತಾಲೂಕು ಎಂದು ೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತರ ಬದುಕು ಕೃಷಿ ಕಾರ್ಯಗಳಿಗೆ ಮಾತ್ರ ಸೀಮಿತವಾಗಿದೆ. ಮಕ್ಕಳ ಶಿಕ್ಷಣ ಮತ್ತು ಕೃಷಿ ಕಾರ್ಯಕ್ಕಾಗಿವಿವಿಧ ಬ್ಯಾಂಕ್‌ಗಳಲ್ಲಿ ಪಡೆದ ಸಾಲಮರು ಪಾವತಿಸಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಮರ್ಪಕವಾಗಿ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕು ರೈತ ಸಂಘದ ಮಾಜಿ ಅಧ್ಯಕ್ಷ ಶ್ರೀಧರ್‌ಬಂಡ್ಲಾಪುರ ಮಾತನಾಡಿ, ಅತಿವೃಷ್ಟಿಯಿಂದ ತೋಟಗಾರಿಕಾ ಬೆಳೆಗಳು ನಿಧಾನವಾಗಿ ತಮ್ಮ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳು ರೈತರ ಮನೆಗಳಿಗೆ ತೆರಳಿ ಒತ್ತಾಯ ಪೂರ್ವಕವಾಗಿ ಸಾಲ ವಸೂಲಾತಿ ಮಾಡುವುದು, ವಕೀಲರು ಕೋರ್ಟ್ ನೋಟಿಸ್ ನೀಡುವುದು, ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. 2023-24ರ ಸಾಲಿನ ಸಲುಭೀಮಾ ಯೋಜನೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.