ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ

1b61fe81-4154-43ea-a1a0-8119506cbed7
ಆಮ್ ಆದ್ಮಿ ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ.ಕೆ.ಸುಂದರಗೌಡ ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
Published on

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣವಾಗಿ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿ ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ.ಕೆ.ಸುಂದರಗೌಡ ಒತ್ತಾಯಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ತಾಲೂಕಿನ ಕೆಲ ಹೋಬಳಿಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಡಲಾಗಿದೆ. ಬರ ಅಧ್ಯಯನ ನಡೆಸಲು ಬಂದ ತಂಡಕ್ಕೆ ಇಲ್ಲಿನ ಬರದ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ಜಿಲ್ಲಾಡಳಿತ ವಿಫಲವಾಗಿರುವುದೇ ಇದಕ್ಕೆಲ್ಲ ಕಾರಣ ಎಂದು ದೂರಿದರು.
ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ೭ ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವುದಾಗಿ ಹೇಳಿದ್ದ ಸರ್ಕಾರ ಇದೀಗ ತ್ರಿ ಫೇಸ್ ವಿದ್ಯುತ್ ಸರಬರಾಜು ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರಿಂದಾಗಿ ಬೆಳೆ ಕಳೆದುಕೊಂಡ ರೈತರು ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಬಡ ರೈತರ ಬದುಕು ಕಟ್ಟಿಕೊಡುವ ಉz್ದೆÃಶದಿಂದ ಬರನಿರ್ವಹಣಾ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.
ಕಾಡು ನಾಶದಿಂದಾಗಿ ವನ್ಯಜೀವಿಗಳು ನಾಡಿಗೆ ಬಂದು ದಾಂಧಲೆ ನಡೆಸುತ್ತಿವೆ. ಆದರೆ ಕಾಡುಪ್ರಾಣಿಗಳನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಜನವಿರೋಧಿ ಅಧಿಕಾರಿಗಳಿಂದ ಮಲೆನಾಡಿನ ರೈತರ ರಕ್ಷಣೆ ಸಾಧ್ಯವಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿಯಲ್ಲಿ ಎಎಪಿ ಮುಖಂಡರಾದ ವಿಲಿಯಂ ಪೆರೇರಾ, ಪುಟ್ಟರಾಜು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net