ಬಿರುಸಿನ ಮಳೆ, ಕಾಸರಗೋಡಲ್ಲಿ ಶಾಲೆಗಳಿಗೆ ರಜೆ

RAIN NEW
Published on

ಕಾಸರಗೋಡು: ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನ.15ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್‌ವೀರ್‌ಚಂದ್ ಆದೇಶಿಸಿದ್ದಾರೆ.

ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ. ಕೇಂದ್ರ ಹವಾಮಾನ ಇಲಾಖೆ ನ.15ರಂದು ಕಾಸರಗೋಡು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿಂದೆ ಬಿರುಸಿನ ಮಳೆಯಾಗಿರುವ ಪ್ರದೇಶದಲ್ಲಿ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಇಳಿಜಾು ಹಾಗೂ ಮಲೆನಾಡು ಪ್ರದೇಶಗಳ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಮಲೆನಾಡು ಪ್ರದೇಶಗಳಲ್ಲಿ ರಾತ್ರಿ ವಾಹನ ಸಂಚಾರ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net