ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Crime Logo
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿ ಮನೆಯ ಕೊನೆಯೊಂದರಲ್ಲಿ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಲ್ಲಿಯ ಸಿದ್ದೇಶ್ವರ ನಗರದಲ್ಲಿ ಮಂಗಳವಾರ ನಡೆದಿದೆ.

ರಾಜು ಹನುಮಂತಪ್ಪ ಅಮಾಸೆ (45) ಮೃತ ವ್ಯಕ್ತಿ.

ಈತನ ಪತ್ನಿ ಹಾಗೂ ಮಕ್ಕಳು ದಾವಣಗೆರೆಯಲ್ಲಿ ವಾಸವಾಗಿದ್ದಾರೆ. ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮನೆಯಲ್ಲಿ ಒಬ್ಬನೆ ಇದ್ದಾಗ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದು ಆತನ ಶವ ಕೊಳೆತ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net