ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

Deeksha bhoomi
Published on

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಡಾ. ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿ ದೀಕ್ಷಾ ಭೂಮಿ ಯಾತ್ರೆಗೆ ನಿಯೋಜಿಸಲು ಯಾತ್ರಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ಸೈಟ್‌ನಲ್ಲಿ www.sw.kar.nic.in  31 ರೊಳಗೆ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು- 70 ಅಥವಾ ದೂ: 080-26711096 ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net