ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ

30 CRP-2A
Published on

ಚನ್ನರಾಯಪಟ್ಟಣ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆ ಪಡೆದ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಶಾಸಕ ಸಿ. ಎನ್. ಬಾಲಕೃಷ್ಣ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ಬೇರೆ ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿಯೇ ಪ್ರತಿ ವರ್ಷ ಅಕ್ಟೋಬರ್‌ನಲ್ಲಿ ದೀಕ್ಷಾ ಭೂಮಿ ಯಾತ್ರೆ ನಡೆಯುತ್ತದೆ.

ಚನ್ನರಾಯಪಟ್ಟಣ ತಾಲೂಕಿನಿಂದ 38, ಹೊಳೆನರಸೀಪುರದಿಂದ 5 ಅನುಯಾಯಿಗಳನ್ನು ಯಾತ್ರೆಗೆ ಕಳುಹಿಸುತ್ತಿರುವುದಾಗಿ ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ತ್ಯಾಗರಾಜ್, ಕಚೇರಿ ಅಧೀಕ್ಷಕ ಮೋಹನ, ಮುಖಂಡರಾದ ಪ್ರಕಾಶ, ಯೋಗೀಶ್ ಗುರಿಗಾರನಹಳ್ಳಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net