

ತಿ.ನರಸೀಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಜನಸಂಘ ಸಂಸ್ಥಾಪಕ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.
ರಾಷ್ಟ್ರೀಯ ಹೆದ್ದಾರಿ ಜಂಕ್ಷನ್‌ನಲ್ಲಿರುವ ನರಸೀಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಪುರಸಭೆಯ ಮಾಜಿ ಸದಸ್ಯ ಎನ್.ಲೋಕೇಶ್ ಮಾತನಾಡಿ, ಭಾರತೀಯ ಜನಸಂಘದ ನೇತಾರರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನಸೇವೆ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರವಾಗಿ ಹೇಳಿದರು.
ಬಳಿಕ ಅಗಲಿದ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಭೈರಪ್ಪ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಿಜೆಪಿ ಕ್ಷೇತ್ರಾಧ್ಯಕ್ಷ ಹಿರಿಯೂರು ಶಿವಕುಮಾರ್, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಕೆ.ಮಹದೇವ ಶೆಟ್ಟಿ, ಎಸ್ಸಿ ಮೋರ್ಚಾದ ಅಧ್ಯಕ್ಷ ಚೌಹಳ್ಳಿ ಎಸ್.ಸಿದ್ದರಾಜು, ಟೌನ್ ಅಧ್ಯಕ್ಷ ಕೆ.ನಂಜುಂಡಸ್ವಾಮಿ, ಮುಖಂಡರಾದ ರಾಜಶೇಖರ ಮೂರ್ತಿ, ಅಂಗಡಿ ರಮೇಶ ಇದ್ದರು.