ಪಂಡಿತ ದೀನದಯಾಳ ಉಪಾಧ್ಯಾಯರ ಕೊಡುಗೆ ಅಪಾರ

Nela Ph 05 Pushpananama
ಪಂಡಿತ ದೀನದಯಾಳ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಬಡಾವಣೆಯ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಿದ್ದು, ವಿಜೇತ ಮಹಿಳೆಯರಿಗೆ ಬಹುಮಾನ ನೀಡಲಾಯಿತು.ತಾಲೂಕು ಪ್ರಧಾನ ಕಾರ್ಯದರ್ಶಿ ಶೀಲಾಶಂಕರ್, ನಗರ ಅಧ್ಯಕ್ಷ ಕೇಶವ್, ಮುಖಂಡರಾದ ಶೋಭಾ, ನೀಲಾ, ವಸಂತ, ಸುಜಾತ, ಸುವಲತ, ಮಂಜುಳಾ, ಗೀತಾರಾಥಾ, ಶಾರದ ಉಪಸ್ಥಿತರಿದರು.
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ನಗರದ ರೇಣುಕಾನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪಂಡಿತ ದೀನದಯಾಳ ಉಪಾಧ್ಯಾಯ ಅವರ 108ನೇ ಜಯಂತಿ ಆಚರಿಸಲಾಯಿತು.
ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಂಜುಳಾಸುರೇಶ್ ಮಾತನಾಡಿ, ಪಂಡಿತ ದೀನದಯಾಳ ಉಪಾಧ್ಯಾಯರು ಬಿಜೆಪಿ ಸಂಘಟನೆಯಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಜತೆಗೆ ಜನಸಂಘ ಸ್ಥಾಪನೆ ಮಾಡಿ ಬಳಿಕ ಅದು ಬಿಜೆಪಿ ಪಕ್ಷವಾಗಿ ಪರಿವರ್ತನೆಗೊಂಡಿದೆ. ಐದು ವರ್ಷಕೊಮ್ಮೆ ಪಕ್ಕದಿಂದ ಸದದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಸುತ್ತಿದ್ದು, ಪ್ರತಿಯೊಬ್ಬರು ಸಕ್ರಿಯವಾಗಿ ಭಾಗವಹಿಸಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net