

ಮೂಲ್ಕಿ: ದೀಪ ಸಂಜೀವಿನಿಯ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಯ ಸಹಕಾರಿಯಾಗಿ ಬೆಳೆಯುತ್ತಿರುವುದು ಸಂತಸ ತಂದಿದೆ ಎಂದು ಶಾಂಭವಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭಾನುಮತಿ ಶೆಟ್ಟಿ ಹೇಳಿದರು.
ಬಪ್ಪನಾಡು ದೇವಸ್ಥಾನದ ವಠಾರದಲ್ಲಿ ದೀಪ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಬ್ಯಾಂಕ್ ಆಫ್ ಬರೋಡ ಮೂಲ್ಕಿ ಶಾಖೆಯ ಮ್ಯಾನೇಜರ್ ಸಚಿನ್ ಹೆಗ್ಡೆ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡ ಸುನೀಲ್ ಆಳ್ವ, ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಐಎಂ ಶಕುಂತಲಾ, ಅತಿಕಾರಿಬೆಟ್ಟು ಪಂಚಾಯಿತಿ ಉಪಾಧ್ಯಕ್ಷ ಮನೋಹರ್ ಕೋಟ್ಯಾನ್, ನಿಖಿಲ್ ಇದ್ದರು.
ಸಂಜೀವಿನಿ ಒಕ್ಕೂಟದ ಪ್ರೀತಿಕಾ ವಂದಿಸಿದರು. ಮೂಲ್ಕಿ ತಾಲೂಕಿನ 7 ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ಸದಸ್ಯರು ಭಾಗವಹಿಸಿ ಉತ್ಪನ್ನಗಳನ್ನು ಮಾರಾಟ ಮಾಡಿದರು.