

ಗುಂಡ್ಲುಪೇಟೆ : ಆಹಾರ ಅರಸಿ ಕಾಡಿನಿಂದ ಬಂದಿದ್ದ ಜಿಂಕೆಯೊಂದು ಬೀದಿನಾಯಿಗಳ ದಾಳಿಗೆ ಸಿಲುಕಿ ಸಾವಿಗೀಡಾದ ಘಟನೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಆಹಾರ ಅರಸಿ ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದ ಕಾಡಂಚಿನ ಗ್ರಾಮಕ್ಕೆ ಬಂದಿದ್ದ 3 ವರ್ಷದ ಗಂಡು ಜಿಂಕೆ ನಸುಕಿನಲ್ಲಿ ಬೀದಿನಾಯಿಗಳ ದಾಳಿಗೆ ಬಲಿ ಆಗಿದೆ. ವಿಷಯ ತಿಳಿದ ಬಫರ್ ವಲಯದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಳೇಬರವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ಅಂತ್ಯಕ್ರಿಯೆ ನಡೆಸಿದರು. ಪ್ರಭಾರ ವಲಯಾರಣ್ಯಾಧಿಕಾರಿ ಶಿವಕುಮಾರ್ ಇತರರು ಇದ್ದರು.