ನಾಯಿ ದಾಳಿಯಿಂದ ಜಿಂಕೆ ಸಾವು

ನಾಯಿ ದಾಳಿಯಿಂದ ಜಿಂಕೆ ಸಾವು
Published on

ಗುಂಡ್ಲುಪೇಟೆ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆಯೊಂದು ಬೀದಿನಾಯಿಗಳ ದಾಳಿಗೆ ಸಿಕ್ಕಿ ಸಾವಿಗೀಡಾದ ಪ್ರಕರಣ ತಾಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಬಂಡೀಪುರ ಹುಲಿ ಯೋಜನೆಯ ಅರಣ್ಯದಿಂದ ಗ್ರಾಮಕ್ಕೆ ಬಂದಿದ್ದ 2 ವರ್ಷದ ಗಂಡು ಜಿಂಕೆ ಬೀದಿನಾಯಿಗಳ ದಾಳಿಗೆ ಸಿಲುಕಿ ಸಾವಿಗೀಡಾಗಿದೆ. ವಿಷಯ ತಿಳಿದ ಬಫರ್ ವಲಯದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಳೇಬರವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ಸೋಮವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಿದರು.

ನಾಯಿಗಳು ಕಚ್ಚಿದ್ದರಿಂದ ಜಿಂಕೆ ಸಾವಿಗೀಡಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪ್ರಭಾರ ವಲಯಾರಣ್ಯಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net