ಬೀದಿ ನಾಯಿಗಳ ದಾಳಿಗೆ ಜಿಂಕೆಗೆ ಗಾಯ

31 MND
Published on

ಮುಂಡಗೋಡ: ಕಾಡಿನಿಂದ ಆಹಾರ ಅರಸಿ ಬಂದಿದ್ದ ಜಿಂಕೆಯ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಅರಣ್ಯದಿಂದ ಜಿಂಕೆಯೊಂದು ಆಹಾರ ಅರಸಿ ಗ್ರಾಮದ ಗದ್ದೆಯ ಕಡೆ ಬಂದಿದೆ. ಜಿಂಕೆಯನ್ನು ಕಂಡ ಬೀದಿ ನಾಯಿಗಳು ಬೆನ್ನಟ್ಟಿ ದಾಳಿ ಮಾಡಿ ಹೊಟ್ಟೆ, ತೊಡೆ, ಮುಖಕ್ಕೆ ಕಚ್ಚಿ ಗಾಯಗೊಳಿಸಿವೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಜಿಂಕೆಯು ಗ್ರಾಮದ ದೇವಸ್ಥಾನದ ಬಳಿ ಎತ್ತರದ ಜಾಗೆಯಿಂದ ಜಿಗಿದ ಪರಿಣಾಮ ಎರಡು ಕಾಲುಗಳು ಮುರಿದಿದೆ. ಸ್ಥಳೀಯರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಜಿಂಕೆಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಯಲ್ಲಾಪುರಕ್ಕೆ ಸಾಗಿಸಲಾಗಿದೆ ಎಂದು ಆರ್‌ಎಫ್‌ಒ ಸುರೇಶ ಕುಲ್ಲೋಳ್ಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net