ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ

17sunti01
Published on

ಸುಂಟಿಕೊಪ್ಪ: ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಆನೆಕಾಡು ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿಯಾಗಿದೆ.

ಆನೆಕಾಡು ಅರಣ್ಯ ಪ್ರದೇಶದ ಜಿಂಕೆ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕೊಂದು ಹಾಕಿದೆ. ಅರಣ್ಯದಂಚಿನಲ್ಲಿರುವ ಆನೆ ಕಂದಕದಲ್ಲಿ ಜಿಂಕೆ ಕಳೇಬರ ಪತ್ತೆಯಾಗಿದೆ.

ಸ್ಥಳೀಯರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ದೇವಯ್ಯ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net