

ಮುಂಡಗೋಡ: ತಾಲೂಕಿನ ಸುಳ್ಳಳ್ಳಿ ಗ್ರಾಮದಲ್ಲಿ ನಾಯಿಗಳ ದಾಳಿಯಿಂದ ಜಿಂಕೆಯೊಂದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಆಹಾರ ಹುಡುಕುತ್ತ ಗ್ರಾಮದತ್ತ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ಸ್ಥಳೀಯರು ನಾಯಿಗಳನ್ನು ಓಡಿಸಿ ಉಪಚಾರ ಮಾಡಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಮಾಹಿತಿ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಿದರು.