ಜಿಂಕೆ ಚರ್ಮ ವಶ, ಆರೋಪಿ ಪರಾರಿ

05 HANUR 1
ಅಜ್ಜೀಪುರ ಗ್ರಾಮದ ಜಮೀನೊಂದರಲ್ಲಿ ಬೇಟೆಯಾಡಿದ್ದ ಜಿಂಕೆ ಚರ್ಮವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡರು. ನಿರಂಜನ್, ಗೋಪಾ, ಅನಿಲ್‌ಕುಮಾರ್ ಇತರರು ಇದ್ದರು.
Published on

ಹನೂರು: ಕಾವೇರಿ ವನ್ಯಜೀವಿ ಧಾಮ ಹನೂರು ವನ್ಯಜೀವಿ ವಲಯ ಶಾಗ್ಯ ಶಾಖೆಯ ಎಲ್ಲೇಮಾಳ ಗಸ್ತು ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಜಮೀನೊಂದರಲ್ಲಿ ಬೇಟೆಯಾಡಿದ್ದ ಜಿಂಕೆ ಚರ್ಮವನ್ನು ಗುರುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.

ತಾಲೂಕಿನ ಅಜ್ಜೀಪುರ ಗ್ರಾಮದ ನಾಗರಾಜು (40) ತಲೆಮರೆಸಿಕೊಂಡಿರುವ ಆರೋಪಿ. ಈತ ಜಮೀನಿನಲ್ಲಿ ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸಿಕೊಂಡು ಚರ್ಮವನ್ನು ಅಲ್ಲಿಯೇ ಬಿಸಾಡಿದ್ದನು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿಸಿಎಫ್ ಸುರೇಂದ್ರ ಹಾಗೂ ಎಸಿಎಫ್ ಮರಿಸ್ವಾಮಿ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ನಿರಂಜನ್ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ಜಿಂಕೆ ಚರ್ಮವನ್ನು ವಶಪಡಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಗೋಪಾ, ಸಿಬ್ಬಂದಿಗಳಾದ ಅನಿಲ್‌ಕುಮಾರ್, ಶಿವರಾಜ್ ಹಾಗೂ ಇನ್ನಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net