ಜಿಂಕೆ ಚರ್ಮ ಸಾಗಿಸುತ್ತಿದ್ದ ಇಬ್ಬರ ಬಂಧನ

3kglphoto5
Published on

ಕೊಳ್ಳೇಗಾಲ: ತಾಲೂಕಿನ ನರೀಪುರ ಗ್ರಾಮದಲ್ಲಿ ಎರಡು ಜಿಂಕೆ ಚರ್ಮಗಳನ್ನು ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ದೊಡ್ಡ ಕವಲಂದೆ ಗ್ರಾಮದ ಇಫ್ತಿಕಾರ್ ಅಹಮ್ಮದ್‌ಖಾನ್(30), ಅಬ್ದುಲ್ ಮುತಾಲಿಕ್(30) ಬಂಧಿತರು. ನರೀಪುರ ಗ್ರಾಮದ ಬಳಿ ಶುಕ್ರವಾರ ರಾತ್ರಿ ಇವರಿಬ್ಬರೂ ಬೈಕ್‌ನಲ್ಲಿ ಜಿಂಕೆ ಚರ್ಮ ಸಾಗಿಸುತ್ತಿದ್ದರು. ಮಾಹಿತಿ ತಿಳಿದ ಅರಣ್ಯ ಸಂಚಾರಿ ದಳದ ಸಬ್ ಇನ್ಸ್‌ಪೆಕ್ಟರ್ ವಿಜಯರಾಜ್ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net