ಸೋಲಿನ ಕಹಿಯಿಂದ ಹೊರಬನ್ನಿ, ಪಕ್ಷ ಸಂಘಟಿಸಿ: ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿಕೆ

defeat, bitterness, party, MP,
Published on

ದಾವಣಗೆರೆ: ಕಾರ್ಯಕರ್ತರು ವಿಧಾನಸಭೆ ಚುನಾವಣೆ ಸೋಲಿನಿಂದ ಧೃತಿಗೆಡದೆ ಪಕ್ಷವನ್ನು ಬೂತ್ ಮಟ್ಟದಲ್ಲಿ ಮರು ಸಂಘಟನೆ ಮಾಡಲು ತಯಾರಾಗಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

ನಗರದ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರಕ್ಕೆ ಜಯ ತಂದುಕೊಡುವ ಮೂಲಕ ಪ್ರಧಾನಿ ಮೋದಿಯವರ ಕೈ ಬಲ ಪಡಿಸಬೇಕು ಎಂದು ಹೇಳಿದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ಪಕ್ಷದ ಬೆಳವಣಿಗೆ ಹಾಗೂ ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಹಿ ಅನುಭವದಿಂದ ಮೇಲೇಳಬೇಕು ಎಂದರು.

ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್‌ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಪ್ರಾಸ್ತಾವಿಕ ಮಾತನಾಡಿದರು.

ಸಭೆಯಲ್ಲಿ ಮಾಜಿ ಶಾಸಕ ಎಸ್.ಎ. ರವಿಂದ್ರನಾಥ್, ವಿಧಾನ ಪರಿಷತ್‌ನ ಮಾಜಿ ಸದಸ್ಯ ಡಾ. ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಎಸ್.ಎ. ರಾಮಚಂದ್ರ, ಮುಖಂಡರಾದ ಯಶವಂತರಾವ್ ಜಾಧವ್, ಎಚ್.ಎಸ್. ಶಿವಕುಮಾರ್, ಬಿ.ಜೆ. ಅಜಯಕುಮಾರ್, ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಕಾರ್ಯಕರ್ತರಿದ್ದರು.

ನಾಗರಾಜ್ ಸೂಕ್ಕೆ ಸ್ವಾಗತಿಸಿದರು. ಮಂಜಾನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಶಾಂತರಾಜ್ ಪಾಟೀಲ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net