

ವಿಜಯವಾಣಿ ಸುದ್ದಿಜಾಲ ಧಾರವಾಡ
ಕ್ರೀಡಾಕೂಟಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸೂಕ್ತ. ಜೀವನದಲ್ಲಿ ಸೋಲು ನಿಮಗೆ ಯಶಸ್ಸಿಗಿಂತ ಹೆಚ್ಚಿನ ಪಾಠ ಕಲಿಸುತ್ತದೆ ಎಂದು ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ವಿಷ್ಣು ಹೆಬ್ಬಾರ ಹೇಳಿದರು.
ನಗರದ ಜೆಎಸ್ಎಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾವೀರ ಉಪಾಧ್ಯೆ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ. ವಿದ್ಯಾರ್ಥಿಗಳು ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಿಗೆ ಸಹ ಆದ್ಯತೆ ನೀಡುವ ಮೂಲಕ ಪ್ರತಿ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು. ಇದು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಹ ಮುಖ್ಯವಾಗಲಿದೆ ಎಂದರು.
ಶಾಲೆ ಮುಖ್ಯಾಧ್ಯಾಪಕಿ ಮೈನಾವತಿ ದಿವಟೆ ಅಧ್ಯಕ್ಷತೆ ವಹಿಸಿದ್ದರು. ಸುಧಾಮಣಿ ರಾವ್, ಇತರರು ಇದ್ದರು. ರಾಜೇಶ್ವರಿ ಶೆಟ್ಟಿ ಸ್ವಾಗತಿಸಿದರು. ಶ್ಯಾಮಲಾ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಂತೇಶ ಕಬನೂರ ನಿರೂಪಿಸಿದರು. ಶಶಿಕಲಾ ಕಮ್ಮಾರ ವಂದಿಸಿದರು.