ಪದವಿ ಪೂರ್ವ, ಪದವಿ ಶಿಕ್ಷಣ ಅಗತ್ಯ

16 sep tnp 01
Published on

ತಿ.ನರಸೀಪುರ: ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾರ್ಥಿಗಳು ಪದವಿ ಪೂರ್ವ ಮತ್ತು ಪದವಿ ಶಿಕ್ಷಣವನ್ನು ಪೂರ್ಣಗೊಳಿಸಬೇಕು ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ನಾಗರಾಜು ಬಿಜಗನಹಳ್ಳಿ ಸಲಹೆ ನೀಡಿದರು.


ಪಟ್ಟಣದ ಹಳೇ ಸಂತೆಮಾಳದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿ, ಮಕ್ಕಳು ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪಡೆಯುವಂತೆ ಪದವಿ ಪೂರ್ವ ಮತ್ತು ಪದವಿ ಶಿಕ್ಷಣವನ್ನು ಕಡ್ಡಾಯವಾಗಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು. ಕೀಳರಿಮೆ ತೊರೆದು ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.


ಹಿರಿಯ ಉಪನ್ಯಾಸಕ ಡಾ.ಎಸ್.ಮಂಗಳಮೂರ್ತಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನಲ್ಲಿ 821 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ನೀಡಲಾಗಿದೆ ಎಂದು ತಿಳಿಸಿದರು.


ನೂತನ ಪ್ರಾಂಶುಪಾಲ ಡಿ.ಸಿ.ಲಿಂಗರಾಜು, ಉಪನ್ಯಾಸಕರಾದ ಸಿದ್ದಪ್ಪ, ರೂಪಶ್ರೀ ಅವರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಎನ್.ಜವರಯ್ಯ, ವಿಜಯಸ್ವಾಮಿ, ಸುಮಂಗಲ ಅಕ್ಕಿ, ಸುಮಿತ್ರಮ್ಮ, ಜಮುನಾಶ್ರೀ, ಶಿವರಂಜಿನಿ, ಸುಮಲತಾ, ಪ್ರದೀಪ್, ರಾಜೇಂದ್ರ ಪ್ರಸಾಸ್, ಸಿದ್ದರಾಜು, ಅಂಜನ್ ಕುಮಾರ್, ಕವಿತಾ, ಕಾವ್ಯಾ, ಪಾರ್ವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net