ಪದವಿ ಪರೀಕ್ಷೆ ಫಲಿತಾಂಶ ಪ್ರಕಟಿಸಿ

sfi manavi
ಗಂಗಾವತಿ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯೆ ವಿಜಯಲಕ್ಷ್ಮೀ ಕಲಶೆಟ್ಟಿಗೆ ಎಸ್‌ಎ್ಐ ತಾಲೂಕು ಸಮಿತಿ ಶನಿವಾರ ಮನವಿ ಸಲ್ಲಿಸಿತು. ಸಮಿತಿ ಅಧ್ಯಕ್ಷ ಅಮರೇಶ ಕಡಗದ್, ಪದಾಧಿಕಾರಿಗಳಾದ ರಾಜಾಭಕ್ಷಿ, ಶಿವಕುಮಾರ ಇತರರಿದ್ದರು
Published on

ಗಂಗಾವತಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಪದವಿ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆ ಲಿತಾಂಶ ಪ್ರಕಟಿಸುವಂತೆ ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ಎಸ್‌ಎ್ಐ ತಾಲೂಕು ಅಧ್ಯಕ್ಷ ಅಮರೇಶ ಕಡಗದ್ ಮಾತನಾಡಿ, ಬಳ್ಳಾರಿ ವಿವಿ ವ್ಯಾಪ್ತಿಯಲ್ಲಿ ಬರುವ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನ 150 ವಿದ್ಯಾರ್ಥಿಗಳ ಸೆಮಿಸ್ಟರ್ ಲಿತಾಂಶ ತಡೆಹಿಡಿದಿದ್ದು, ಮುಂದಿನ ಅಧ್ಯಯನಕ್ಕೆ ತೊಂದರೆಯಾಗಿದೆ.

ಮೂರನೇ ಸೆಮಿಸ್ಟರ್ ಪರೀಕ್ಷೆ ಹತ್ತಿರವಾಗುತ್ತಿದ್ದರೂ ಲಿತಾಂಶ ಪ್ರಕಟಿಸಿಲ್ಲ.
ಮರು ಮೌಲ್ಯಮಾಪನ, ಅಂಕಗಳ ಮರು ಎಣಿಕೆ, ಉತ್ತರ ಪತ್ರಿಕೆಗಳ ಛಾಯೆ ಪ್ರತಿಗಾಗಿ ವಿದ್ಯಾರ್ಥಿಗಳಿಂದ 300 ರೂ.ಯಿಂದ 1200ರೂ.ವರೆಗೆ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದ್ದು, ಕೂಡಲೇ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿದರು. ಪ್ರಾಚಾರ್ಯೆ ವಿಜಯಲಕ್ಷ್ಮೀ ಕಲಶೆಟ್ಟಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಘಟಕದ ಪದಾಧಿಕಾರಿಗಳಾದ ರಾಜಾಭಕ್ಷಿ, ಶಿವಕುಮಾರ, ಅಶೋಕ, ರಾಮಣ್ಣ, ಸುರೇಶ, ನಾಗರಾಜ, ಮಂಜುನಾಥ, ಉದಯ, ಅಭಿಷೇಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net