ಪದವಿ ಪರೀಕ್ಷೆ ರದ್ದು ಮಾಡದಿದ್ದರೆ ಆನ್‌ಲೈನ್ ಕ್ಲಾಸ್ ಬಹಿಷ್ಕಾರ: ಬಳ್ಳಾರಿಯಲ್ಲಿ ಸರಳಾದೇವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

Ballari AIDSO Protest
ಬಳ್ಳಾರಿಯ ಸರಳಾದೇವಿ ಪದವಿ ಕಾಲೇಜು ಪ್ರಾಚಾರ್ಯ ಹೇಮಣ್ಣಗೆ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
Published on

ಬಳ್ಳಾರಿ: ಪದವಿ ಪರೀಕ್ಷೆ ರದ್ದುಪಡಿಸದಿದ್ದರೆ ಆನ್‌ಲೈನ್ ತರಗತಿಗಳನ್ನು ಬಹಿಷ್ಕರಿಸಲಾಗುವುದೆಂದು ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಸರಳಾದೇವಿ ಪದವಿ ಕಾಲೇಜು ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಗುರಳ್ಳಿರಾಜ ಮಾತನಾಡಿ, ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸುವುದು ಸರಿಯಲ್ಲ. 1, 3, 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಅವರ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಪ್ರಯತ್ನಗಳನ್ನು ನಡೆಸಲಾಗಿದೆ. ಆನ್‌ಲೈನ್ ಚಳವಳಿ, ಪ್ರಾತಿನಿಧಿಕವಾಗಿ ಕಾಲೇಜು, ವಿವಿಗಳ ಮುಂದೆ ಚಳುವಳಿ, ಕುಲಪತಿ ಹಾಗೂ ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ, ಸರ್ಕಾರದಿಂದ ಯಾವುದೇ ರೀತಿಯ ಸ್ಪಂದನೆ ಇಲ್ಲವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿ ಬಹಿಷ್ಕರಿಸಲು ಮುಂದಾಗಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net