ಶುಶ್ರೂಷಾ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ

padavi pradana
Published on

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜಿನ ಪದವಿ ಪ್ರಧಾನ ಸಮಾರಂಭ ನಡೆಯಿತು.

ಕಾಲೇಜಿನ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮೈಸೂರಿನ ಹೋಲ್ಡ್ಸ್ ವರ್ತ್ ಮೆಮೊರಿಯಲ್ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಪಿ.ದಾಕ್ಷಾಯಿಣಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ ಕುಮಾರ್ ಉದ್ಘಾಟಿಸಿದರು.

ಡಾ.ಕೆ.ಪಿ.ದಾಕ್ಷಾಯಿಣಿ ಅವರು ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ವಚನ ನೀಡಿದರು. ಡಾ.ಸತೀಶ ಕುಮಾರ್ ಶುಶ್ರೂಷಾ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸಮಯ ಪಾಲನೆಯ ಮಹತ್ವ ತಿಳಿಸಿ ತಮ್ಮ ಸಂತಸ ವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಆಡಳಿತಾಧಿಕಾರಿ ಕೆ.ಎಂ.ರೋಹಿಣಿ, ಸಹಾಯಕ ಆಡಳಿತಾಧಿಕಾರಿ ಟಿ.ಎಂ.ಮೋಹನ್, ಸ್ಥಾನೀಯ ವೈಧಾಧಿಕಾರಿ ಡಾ.ವಿ.ಎಸ್.ಸತೀಶ್ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲೆ ಎ.ಕೆ.ಮಂಜುಳಾ, ಮಕ್ಕಳ ವೈಧ್ಯಾಧಿಕಾರಿ ಡಾ.ಸಿ.ಪುರುಷೋತ್ತಮ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಅಲೈಡ್ ಹೆಲ್ತ್‌ನ ಪ್ರಾಂಶುಪಾ ಡಾ.ನರಸಿಂಹ ರೈ, ಶುಶ್ರೂಷಾ ಅಧಿಕಾರಿ ದೇವಕಿ ಹಾಗೂ ನರ್ಸಿಂಗ್ ಕಾಲೇಜಿನ ಸಂಯೋಜಕ ಕೆ.ಪಿ.ಗುರುಪಾದ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ವೃಂಧ ಮತ್ತು ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net