

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ನಡೆದು ಕೆಲವೇ ದಿನಗಳಲ್ಲಿ ಪ್ರಕಟಿಸಲು ಹೆಚ್ಚಿನ ಮುತುವರ್ಜಿ ವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವ ಪ್ರೊ. ದೇವೇಂದ್ರಪ್ಪ ಅವರನ್ನು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ಘಟಕದ ವತಿಯಿಂದ ಗೌರವಿಸಲಾಯಿತು.
ಜೂನ್ ಮತ್ತು ಜುಲೈ ತಿಂಗಳಿನಲ್ಲಿ ನಡೆದ ನಡೆಸಿದ ಕೆಲವೇ ದಿನಗಳಲ್ಲಿ ಫಲಿತಾಂಶ ನೀಡಿರುವುದು ಅತ್ಯಂತ ಶ್ಲಾಘನೀಯ ಸಂಗತಿ. ಈ ಹಿಂದೆ ಹಲವು ಬಾರಿ ಪರೀಕ್ಷೆ ನಡೆದು ಫಲಿತಾಂಶ ಕಾಲಕಾಲಕ್ಕೆ ಬರದೆ ವಿದ್ಯಾರ್ಥಿಗಳು ಹಾಗೂ ಪೋಷಕರು ತುಂಬಾ ಸಂಕಷ್ಟಕ್ಕೀಡಾಗಿದ್ದರು. ಈ ಬಾರಿ ತಕ್ಷಣ ಫಲಿತಾಂಶ ನೀಡಿರುವುದು ವಿದ್ಯಾರ್ಥಿಗಳಲ್ಲಿ ಹಾಗೂ ಅಧ್ಯಾಪಕರಲ್ಲಿ ಸಂತಸ ಉಂಟು ಮಾಡಿದೆ.
ಎಂದು ಸಂಘದ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ. ಕೆ. ಈ ಸಂದರ್ಭ ತಿಳಿಸಿದರು. ವಿಭಾಗ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ನಾಯಕ್, ವಿಭಾಗ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ಶ್ರುತಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕಾಜಲ್, ವಾಣಿಶ್ರೀ ಉಪಸ್ಥಿತರಿದ್ದರು.