ನೀರಾವರಿ ಅನುಷ್ಠಾನದಲ್ಲಿ ವಿಳಂಬ

24 ಸಿಬಿಪಿ 1 ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಪದಾಧಿಕಾರಿಗಳಾದ ವೀರಾಪುರ ಮಂಜುನಾಥ್, ಕೃಷ್ಣಪ್ಪ ಮತ್ತಿತರರು ಇದ್ದರು.
24 cbp 1
24 ಸಿಬಿಪಿ 1 ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಪದಾಧಿಕಾರಿಗಳಾದ ವೀರಾಪುರ ಮಂಜುನಾಥ್, ಕೃಷ್ಣಪ್ಪ ಮತ್ತಿತರರು ಇದ್ದರು.
Published on

ಡಿಸಿ ನೇತೃತ್ವದ ಸಭೆಯಲ್ಲಿ ರೈತರ ಅಸಮಾಧಾನ- ಎಚ್.ಎನ್. ವ್ಯಾಲಿ, ಎತ್ತಿನಹೊಳೆ ಯೋಜನೆ ಜಾರಿಯಲ್ಲೂ ನಿಧಾನಗತಿ

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ
ಕೆರೆಗಳಿಗೆ ನೀರು ಹರಿಸುವ ವಿಚಾರದಲ್ಲಿ ವಿಳಂಬವಾಗುತ್ತಿದೆ ಎಂದು ರೈತರು ಜಿಲ್ಲಾಧಿಕಾರಿಗಳ ಎದುರು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ಎಚ್.ಎನ್.ವ್ಯಾಲಿ ಯೋಜನೆಯಡಿ ತ್ಯಾಜ್ಯ ಸಂಸ್ಕರಿಸಿದ ನೀರನ್ನು ಸಮರ್ಪಕವಾಗಿ ಕೆರೆಗಳಿಗೆ ಹರಿಸುತ್ತಿಲ್ಲ. ಎತ್ತಿನಹೊಳೆ ಯೋಜನೆಯ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅಂತರ್ಜಲ ಮಟ್ಟ ಕುಸಿತದಿಂದ ತೊಂದರೆ ಅನುಭವಿಸುತ್ತಿರುವ ಈ ಭಾಗದಲ್ಲಿ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ ನಿಧಾನಗತಿಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದರು.

ಬಯಲುಸೀಮೆ ಭಾಗದಲ್ಲಿ ನಿರಂತರವಾಗಿ ವಿವಿಧ ಹೋರಾಟಗಳನ್ನು ನಡೆಸುತ್ತ ನೀರಾವರಿ ಸೌಲಭ್ಯಕ್ಕಾಗಿ ಆಗ್ರಹಿಸಲಾಗುತ್ತಿದೆ. ಇದಕ್ಕೆ ಸರ್ಕಾರವು ತ್ಯಾಜ್ಯ ಸಂಸ್ಕರಿಸಿದ ನೀರಾವರಿ ಯೋಜನೆ, ಎತ್ತಿನಹೊಳೆ ಯೋಜನೆ ಸೇರಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದಕ್ಕೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ಆದರೆ, ಚರ್ಚೆಯ ಹಂತದಲ್ಲಿಯೇ ಕಾಲಹರಣ ಮಾಡಲಾಗುತ್ತಿದೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಗೆ ಎಚ್.ಎನ್.ವ್ಯಾಲಿ ಯೋಜನೆಯ ನೀರು ಸಮರ್ಪಕವಾಗಿ ಹರಿಯುತ್ತಿಲ್ಲ. ಹೀಗೆ ನಿರ್ಲಕ್ಷ್ಯ ಮುಂದುವರಿಸಿದರೆ ಪ್ರತಿಭಟನೆಗಳ ಜತೆಗೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನೀರುಗಾಲುವೆಗಳ ದುರಸ್ತಿಗೆ ಆಗ್ರಹ
ಜಿಲ್ಲೆಯ ಸಾಕಷ್ಟು ಭಾಗಗಳಲ್ಲಿ ನೀರು ಕಾಲುವೆಗಳು ಸಮರ್ಪಕವಾಗಿಲ್ಲ. ಕೆರೆಯಿಂದ ಕೆರೆಗೆ ಹಾದು ಹೋಗುವ ಮಾರ್ಗ ಮಧ್ಯದಲ್ಲಿನ ಮೋರಿಗಳು ದುಸ್ಥಿತಿಯಲ್ಲಿದ್ದು, ಸರಿಪಡಿಸಬೇಕೆಂದು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ರೈತರು ಗಮನ ಸೆಳೆದಿರುವ ಸಮಸ್ಯೆಗಳನ್ನು ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ತ್ವರಿತವಾಗಿ ಕಾಮಗಾರಿಗಳನ್ನು ಮುಗಿಸಬೇಕು ಎಂದು ಸೂಚಿಸಿದರು. ಎಚ್.ಎನ್. ವ್ಯಾಲಿ ಮತ್ತು ಎತ್ತಿನಹೊಳೆ ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸುಧೀರ್ಘವಾಗಿ ಚರ್ಚಿಸಲಾಯಿತು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವೀರಾಪುರ ಮುನಿನಂಜಪ್ಪ, ಜಂಟಿ ಕಾರ್ಯದರ್ಶಿ ಕುಪ್ಪಳ್ಳಿ ಶ್ರೀನಿವಾಸ್, ತಾಲೂಕು ಅಧ್ಯಕ್ಷರಾದ ಮರಳಕುಂಟೆ ರಾಮಾಂಜನಪ್ಪ, ತಾದೂರು ಮಂಜುನಾಥ್, ಕಾರ್ಯದರ್ಶಿ ನೆಲಮಾಕಲಳ್ಳಿ ಗೋಪಾಲ್, ಪದಾಧಿಕಾರಿಗಳಾದ ತಾಂಡ್ರ ಮರದಹಳ್ಳಿ ಮಹೇಶ್, ಗುಡಿಹಳ್ಳಿ ಕೆಂಪಣ್ಣ, ನಾಗರಾಜು, ಅಶ್ವತಪ್ಪ, ನಾರಾಯಣಸ್ವಾಮಿ ಸತೀಶ್, ಶ್ರೀರಾಮು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net