ನೊಂದ ಕುಟುಂಬಕ್ಕೆ ಪರಿಹಾರ ನೀಡದೇ ನಿರ್ಲಕ್ಷ್ಯ: ಕೋರ್ಟ್ ಆದೇಶದಂತೆ ಗ್ರಾಮ ಪಂಚಾಯಿತಿ ವಸ್ತು ಜಪ್ತಿ..!!!

Delay in providing compensation Gram Panchayat items confiscation mandya
Published on

ಮದ್ದೂರು: ಕರ್ತವ್ಯದ ವೇಳೆ ಮೃತಪಟ್ಟಿದ್ದ ಗ್ರಾಮ ಪಂಚಾಯಿತಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ, ನ್ಯಾಯಾಲಯದ ಆದೇಶದಂತೆ ತಾಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಜಪ್ತಿ ಮಾಡಲಾಯಿತು.
2024 ಜ.20ರಂದು ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಚರಾಸ್ತಿಗಳನ್ನು ಜಪ್ತಿ ಮಾಡಲು ಆದೇಶ ನೀಡಿದ ಮೇರೆಗೆ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಕಚೇರಿಯ ಕಂಪ್ಯೂಟರ್‌, ಪೀಠೋಪಕರಣಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಎಂದಿನಂತೆ ಬಂದಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಪ್ತಿ ವಿಷಯ ಕೇಳಿದ ತಕ್ಷಣ ಕಂಗಾಲಾಗಿ, ಕಚೇರಿಯಿಂದ ಹೊರ ನಡೆದರು.

Delay in providing compensation 
Gram Panchayat items confiscation

*ಏನಿದು ಪ್ರಕರಣ:* 2009 ರಲ್ಲಿ ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಎಂಬುವವರು ಬೀದಿ ದೀಪಗಳ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ  ಮೃತಪಟ್ಟಿದ್ದರು.
ಈ ವಿಚಾರವಾಗಿ ಗ್ರಾಮ ಪಂಚಾಯಿತಿಯಿಂದ ಪರಿಹಾರ ನೀಡುವಂತೆ ಆತನ ಪತ್ನಿ ಸುಜಾತಾ ಮನವಿ ಸಲ್ಲಿಸಿದ್ದರು.
ಅದರೆ ಮನವಿಯನ್ನು ಗಣನೆಗೆ ತೆಗೆದುಕೊಳ್ಳದ ಅಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಬೇಜವಾಬ್ದಾರಿತನ ತೋರಿದ್ದರು.
ಈ ಸಂಬಂಧ ರವಿ ಅವರ  ಕುಟುಂಬದವರು 2009 ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಿರಂತರ ವಿಚಾರಣೆ ನಡೆದು ಕರ್ನಾಟಕ ಹೈಕೋರ್ಟ್‌ ಪೀಠವು 2009 ರಿಂದ 2023 ರವರೆಗೆ ಶೇ 15ರ ಹೆಚ್ಚುವರಿ ಬಡ್ಡಿ ಸೇರಿ 11 ಲಕ್ಷದ 46 ಸಾವಿರದ 623 ರೂ ಪರಿಹಾರ ಹಣ ತುಂಬಿಕೊಡುವಂತೆ ಆದೇಶಿಸಿದೆ.
ನ್ಯಾಯಾಲಯದ ಆದೇಶದ ಪ್ರಕಾರ ಪರಿಹಾರದ ಪೂರ್ಣ ಹಣವನ್ನು ಮೃತ ರವಿ ಅವರ ಕುಟುಂಬಕ್ಕೆ ನೀಡದ ಕಾರಣ ಹಾಗೂ ನ್ಯಾಯಾಲಯದ ಆದೇಶವನ್ನು ಗ್ರಾಪಂ ಪರಿ ಪಾಲನೆ ಮಾಡದ ಹಿನ್ನಲೆಯಲ್ಲಿ ಜಪ್ತಿ ಪ್ರಕ್ರಿಯೆ ಕೈಗೊಂಡಿದ್ದೇವೆ ಎಂದು ಹಿರಿಯ ವಕೀಲ ಬಿ. ರಾಮಕೃಷ್ಣೇಗೌಡ, ಸಹಾಯಕ ವಕೀಲ ಸುನೀಲ್ ಕುಮಾರ್  ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net